Share:

ವಚನ, ಸಾಂಗತ್ಯ ಮತ್ತು ಜಾನಪದ ಕ್ಷೇತ್ರಗಳಲ್ಲಿ ಅಮೂಲ್ಯ ಕೊಡುಗೆ ನೀಡಿದವರು ಡಾ. ವೀರಣ್ಣ ಬಿ. ರಾಜೂರ. ಕರ್ನಾಟಕ ವಿಶ್ವವಿದ್ಯಾಲಯದ ಡಾ. ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷರಾಗಿ, ಅಂತಾರಾಷ್ಟ್ರೀಯ ಕಿಟೆಲ್ ಸಮ್ಮೇಳನದ ನಿರ್ದೇಶಕರಾಗಿ ಸೇವೆ ಸಲ್ಲಿಕೆ. ಕನ್ನಡ ಸಾಂಗತ್ಯ ಸಾಹಿತ್ಯ, ವಚನ ಅಧ್ಯಯನ, ಸ್ವರವಚನಗಳು, ಬಸವೋತ್ತರ ಯುಗದ ವಚನಕಾರರು, ಏಕಾಂಕ ನಾಟಕಗಳ ಸಂಗ್ರಹ, ಇತ್ಯಾದಿ ಕೃತಿಗಳನ್ನು ರಚಿಸಿದ್ದಾರೆ. ಕರ್ನಾಟಕ ನಾಟಕ ಅಕಾಡಮಿ ಗೌರವ ಫೆಲೊಶಿಪ್, ಫ.ಗು. ಹಳಕಟ್ಟಿ ಪ್ರಶಸ್ತಿ, ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು ಲಭಿಸಿವೆ.